
ಭಾರತ ಮತ್ತು ಅಫ್ಘಾನಿಸ್ತಾನ ನಡುವೆ ಬೆಳೆಯುತ್ತಿರುವ ರಾಜತಾಂತ್ರಿಕ ಬಾಂಧವ್ಯವನ್ನು ಟೀಕಿಸಿರುವ ಪಾಕ್ ಸೇನಾ ವಕ್ತಾರ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ, ಮುಸ್ಲಿಮರು ಕಾಫಿರ್‌ಗಳೊಂದಿಗೆ ಸ್ನೇಹ ಬೆಳೆಸಬಾರದು ಎಂದು ಹೇಳಿದ್ದಾರೆ.
ಅಫ್ಘಾನಿಸ್ತಾನದಲ್ಲಿ ಭಾರತ ಕೈಗೊಳ್ಳುತ್ತಿರುವ ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳು ಮತ್ತು ಮಾನವೀಯ ನೆರವು ಪಾಕಿಸ್ತಾನಕ್ಕೆ ಭದ್ರತಾ ದೃಷ್ಟಿಯಿಂದ ಹಿನ್ನಡೆಯಾಗಿ ಪರಿಣಮಿಸಿದೆ.
ಧಾರ್ಮಿಕ ಬಣ್ಣ ಬಳಿದು ಗಡಿಭಾಗದ ರಾಜಕೀಯ ಬಿಕ್ಕಟ್ಟನ್ನು ಪ್ರಚೋದಿಸಲು ಪಾಕಿಸ್ತಾನ ಯತ್ನಿಸುತ್ತಿದೆ ಎಂದು ವಿಶ್ಲೇಷಕರು ಈ ಹೇಳಿಕೆಯನ್ನು ಖಂಡಿಸಿದ್ದಾರೆ.