ನವದೆಹಲಿಯಲ್ಲಿ ನಡೆದ ಬ್ರಿಕ್ಸ್ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಸಂಘರ್ಷಗಳ ವಿರುದ್ಧ ಎಚ್ಚರಿಕೆ ನೀಡಿ ಒಗ್ಗೂಡಿ ಕೆಲಸ ಮಾಡಲು ಕರೆ ನೀಡಿದರು.
ತಂತ್ರಜ್ಞಾನ ಮತ್ತು ನಿರ್ಣಾಯಕ ಖನಿಜಗಳನ್ನು ಅಸ್ತ್ರವಾಗಿಸುವುದರಿಂದ ಜಾಗತಿಕ ಪ್ರಗತಿ ಮತ್ತು ಸಮೃದ್ಧಿಗೆ ಅಡ್ಡಿಯಾಗಬಹುದು ಎಂದು ಮೋದಿ ಗಂಭೀರ ಕಳವಳ ವ್ಯಕ್ತಪಡಿಸಿದರು.
ಸಾಂಕ್ರಾಮಿಕ ರೋಗಗಳು ಮತ್ತು ಹವಾಮಾನ ವಿಪತ್ತುಗಳನ್ನು ಎದುರಿಸಲು ಬ್ರಿಕ್ಸ್ ಸಮಗ್ರ ಮುನ್ನೆಚ್ಚರಿಕೆ ವ್ಯವಸ್ಥೆ ರೂಪಿಸುವ ಕುರಿತು ಶೃಂಗಸಭೆಯಲ್ಲಿ ಒಮ್ಮತಕ್ಕೆ ಬರಲಾಗಿದೆ.