
ರಾಮನಗರದ ಜಾನಪದ ಲೋಕದಲ್ಲಿ ಕರ್ನಾಟಕ ಜಾನಪದ ಪರಿಷತ್ತು ವತಿಯಿಂದ 2026–27ನೇ ಸಾಲಿನ ಜನಪದ ಪ್ರದರ್ಶಕ ಕಲೆಗಳ ಸ್ನಾತಕೋತ್ತರ ಕೋರ್ಸ್‌ಗೆ (ಎಂಪಿಎ) ಪ್ರವೇಶ ಪಡೆಯಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ ಮಾನ್ಯತೆ ಹೊಂದಿರುವ ಈ ಕೋರ್ಸ್ ಎರಡು ವರ್ಷಗಳ ಅವಧಿಯದ್ದಾಗಿದ್ದು, ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನವಾಗಿದೆ.
ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ರಾಮನಗರದ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿರುವ ನಾಡೋಜ ಎಚ್.ಎಲ್. ನಾಗೇಗೌಡ ಸಂಶೋಧನಾ ಕೇಂದ್ರದ ಸಂಯೋಜಕರಾದ ಡಾ. ಸಂದೀಪ್ ಕೆ.ಎಸ್ ಅವರನ್ನು ಸಂಪರ್ಕಿಸಬಹುದಾಗಿದೆ.