
ಸಲ್ಮಾನ್ ಖಾನ್ ಅಭಿನಯದ ಯುದ್ಧ ಆಧಾರಿತ ‘ಮಾತೃಭೂಮಿ: ಮೇ ವಾರ್ ರೆಸ್ಟ್ ಇನ್ ಪೀಸ್’ ಚಿತ್ರವು ಡಿಸೆಂಬರ್ 4ರಂದು ದೇಶಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.
2020ರಲ್ಲಿ ಗಲ್ವಾನ್ ಕಣಿವೆಯಲ್ಲಿ ನಡೆದ ಭಾರತ ಮತ್ತು ಚೀನಾ ಸೈನಿಕರ ನಡುವಿನ ನೈಜ ಘರ್ಷಣೆಯನ್ನು ಆಧರಿಸಿ ಈ ಸಿನಿಮಾವನ್ನು ಅಪೂರ್ವ ಲಖಿಯಾ ನಿರ್ದೇಶನ ಮಾಡಿದ್ದಾರೆ.
ಈ ಘರ್ಷಣೆಯಲ್ಲಿ ವೀರಮರಣ ಅಪ್ಪಿದ ಕಮಾಂಡಿಂಗ್ ಆಫೀಸರ್ ಬಿಕ್ಕುಮಲ್ಲ ಸಂತೋಷ್ ಬಾಬು ಅವರ ಪಾತ್ರದಲ್ಲಿ ಸಲ್ಮಾನ್ ಖಾನ್ ನಟಿಸಿದ್ದಾರೆ.