
ಕೆಪಿಎಸ್ಸಿ ನೇಮಕಾತಿ ಅಕ್ರಮಗಳ ಕುರಿತು ಸಿಬಿಐ ತನಿಖೆ ನಡೆಸಬೇಕೆಂದು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಆಗ್ರಹಿಸಿದ್ದು, ಈ ವಿಚಾರವಾಗಿ ಪ್ರಿಯಾಂಕ್ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
2011ರ ಬ್ಯಾಚ್ನ ನೇಮಕಾತಿ ಅಕ್ರಮದ ಸಿಐಡಿ ವರದಿ ಮತ್ತು ಆರ್ಡಿಪಿಆರ್ ಇಂಜಿನಿಯರ್ಗಳ ನೇಮಕಾತಿಯಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ಕುಮಾರಸ್ವಾಮಿ ಪ್ರಶ್ನೆಗಳನ್ನು ಎತ್ತಿದ್ದಾರೆ.
ಪ್ರಿಯಾಂಕ್ ಖರ್ಗೆ ಅವರು ತಮ್ಮ ವಿರುದ್ಧದ ಆರೋಪಗಳಿಗೆ ತಾರ್ಕಿಕ ಉತ್ತರ ನೀಡುವ ಬದಲು ಪಲಾಯನ ಮಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.