
ಆಗಸ್ಟ್ 4ರಂದು ಫುಕೆಟ್-ದೆಹಲಿ ವಿಮಾನ ಹಾರಾಟದ ವೇಳೆ 300 ಅಡಿ ಕೆಳಗೆ ಕುಸಿದ ಘಟನೆಗೆ ಸಂಬಂಧಿಸಿದಂತೆ, ಮುಖ್ಯ ಪೈಲಟ್ ಡ್ರಗ್ಸ್ ಸೇವಿಸಿರುವುದು ಎರಡನೇ ಪರೀಕ್ಷೆಯಲ್ಲಿ ದೃಢಪಟ್ಟಿದೆ.
ನಾಗರಿಕ ವಿಮಾನಯಾನ ಸಚಿವಾಲಯವು ಏರ್ ಇಂಡಿಯಾ ಸಿಇಒ ಕ್ಯಾಂಪ್ಬೆಲ್ ವಿಲ್ಸನ್ ಅವರಿಗೆ ಸಮನ್ಸ್ ನೀಡಿದ್ದು, ಹಿರಿಯ ಅಧಿಕಾರಿಗಳು ಸಚಿವಾಲಯದ ಕಾರ್ಯದರ್ಶಿ ಸಮೀರ್ ಕುಮಾರ್ ಸಿನ್ಹಾ ಅವರನ್ನು ಭೇಟಿಯಾಗಿ ವಿವರಣೆ ನೀಡಿದ್ದಾರೆ.
ಈ ಅವಘಡದಲ್ಲಿ 4 ಸಿಬ್ಬಂದಿ ಮತ್ತು 17 ಪ್ರಯಾಣಿಕರು ಗಾಯಗೊಂಡಿದ್ದು, ವಿಮಾನ ಅಪಘಾತ ತನಿಖಾ ಬ್ಯೂರೋ (AAIB) ಘಟನೆಯ ಕುರಿತು ಸಮಗ್ರ ತನಿಖೆ ನಡೆಸುತ್ತಿದೆ.