
ಬಾಗಲಕೋಟೆ ತಾಲೂಕಿನ ಮುಗಳೊಳ್ಳಿ ತಾಂಡಾದ ಸರ್ಕಾರಿ ಶಾಲೆಯಲ್ಲಿ ತರಗತಿ ನಡೆಯುತ್ತಿದ್ದಾಗ ಮೇಲ್ಛಾವಣಿ ಕುಸಿದು 8 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ಕಟ್ಟಡ ಅನ್-ಫಿಟ್ ಎಂದು ವರದಿ ನೀಡದ ಎಂಜಿನಿಯರ್ ನಿರ್ಲಕ್ಷ್ಯವೇ ಘಟನೆಗೆ ಕಾರಣವಾಗಿದ್ದು, ಅವರಿಗೆ ನೋಟಿಸ್ ನೀಡಲಾಗುವುದು ಎಂದು ಜಿ.ಪಂ. ಸಿಇಒ ಗಜಾನನ ಬಾಲೆ ತಿಳಿಸಿದ್ದಾರೆ.
ಘಟನೆಯಲ್ಲಿ ಗಾಯಗೊಂಡ ಮಕ್ಕಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಹಾನಿಗೊಳಗಾದ ಭಾಗವನ್ನು ದುರಸ್ತಿ ಮಾಡಲು ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆಗೆ ಸೂಚಿಸಲಾಗಿದೆ.