
ಹುಬ್ಬಳ್ಳಿಯ ಭವಾನಿ ಶಂಕರ ದೇವಾಲಯದ ಪುಷ್ಕರಣಿ ಜಾಗದಲ್ಲಿ ರಸ್ತೆ ನಿರ್ಮಿಸಲಾಗಿದೆ ಎಂದು ಆರೋಪಿಸಿ ಬಿಜೆಪಿ ನಾಯಕರು ಮತ್ತು ಹಿಂದೂಪರ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನೆಯಲ್ಲಿ ಶಾಸಕರಾದ ಅರವಿಂದ್ ಬೆಲ್ಲದ್, ಮಹೇಶ್ ಟೆಂಗಿನಕಾಯಿ, ಎಂಎಲ್‌ಸಿ ಪ್ರದೀಪ್ ಶೆಟ್ಟರ್ ಮತ್ತು ಪ್ರಮೋದ್ ಮುತಾಲಿಕ್ ಭಾಗಿಯಾಗಿದ್ದು, 1500ಕ್ಕೂ ಹೆಚ್ಚು ಪೊಲೀಸರನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ.
ಅಹಿತಕರ ಘಟನೆ ತಡೆಯಲು ದೇವಾಲಯದ ಸುತ್ತಮುತ್ತ 500 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ.