Health & Environment
ನಾಗರಪಂಚಮಿ ದಿನವೇ ಹಾವು ಕಚ್ಚಿ ಮಹಿಳೆ ಸಾವು

ನಾಗರಪಂಚಮಿ ದಿನವೇ ಹಾವು ಕಚ್ಚಿ ಮಹಿಳೆ ಸಾವು

tv9kannada2h
THE BRIEF
1

ಬೆಳಗಾವಿ ಜಿಲ್ಲೆಯ ರಾಯಬಾಗದಲ್ಲಿ ನಾಗರಪಂಚಮಿ ಹಬ್ಬದ ದಿನವೇ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಸತ್ಯವ್ವ ಶಿಂಗೆ (43) ಎಂಬ ಮಹಿಳೆ ಕೊಳಕುಮಂಡಲ ಹಾವು ಕಚ್ಚಿ ಮೃತಪಟ್ಟಿದ್ದಾರೆ.

2

ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆಯೇ ಮಹಿಳೆ ಕೊನೆಯುಸಿರೆಳೆದಿದ್ದು, ರಾಯಬಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

3

ಇದೇ ವೇಳೆ ಶಿವಮೊಗ್ಗದ ಉಂಬಳಬೈಲು ಗ್ರಾಮದಲ್ಲಿ ಪ್ರತ್ಯಕ್ಷವಾಗಿದ್ದ ಬೃಹತ್ ಹೆಬ್ಬಾವನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸುರಕ್ಷಿತವಾಗಿ ಸೆರೆಹಿಡಿದು ದಟ್ಟ ಅರಣ್ಯಕ್ಕೆ ಬಿಟ್ಟಿದ್ದಾರೆ.