
ಪಾಕಿಸ್ತಾನದ ಗುಪ್ತಚರ ಅಧಿಕಾರಿಯೊಂದಿಗೆ ಸೇನಾ ಮಾಹಿತಿಯನ್ನು ಹಂಚಿಕೊಂಡ ಆರೋಪದಲ್ಲಿ ಭಾರತೀಯ ವಾಯುಸೇನೆಯ ಅಧಿಕಾರಿಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಮೇ 30 ರಂದು ಬಂಧಿತನಾದ ಆರೋಪಿಯು ಹನಿಟ್ರ್ಯಾಪ್ಗೆ ಬಲಿಯಾಗಿ ಸಾಮಾಜಿಕ ಮಾಧ್ಯಮಗಳ ಮೂಲಕ ವಿಡಿಯೊ ಕರೆ ಮಾಡಿ ರಹಸ್ಯ ಮಾಹಿತಿಗಳನ್ನು ಸೋರಿಕೆ ಮಾಡಿದ್ದಾಗಿ ತನಿಖೆಯಲ್ಲಿ ಪತ್ತೆಯಾಗಿದೆ.
ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಪೂರ್ಣಗೊಳಿಸಿ ಜುಲೈ 30 ರಂದು ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಲಾಗಿದೆ.