
ಪೋಲೆಂಡ್‌ನ ಕ್ರಾಕೋವ್ ನಗರದ ಕೇಂದ್ರ ಭಾಗದಲ್ಲಿ ಸಂಭವಿಸಿದ ಭೀಕರ ಗುಂಡಿನ ದಾಳಿಯಲ್ಲಿ ಐವರು ಮೃತಪಟ್ಟು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮಧ್ಯಾಹ್ನ ಸುಮಾರು 3 ಗಂಟೆಯ ಸುಮಾರಿಗೆ ಚಲಿಸುವ ಕಾರಿನಿಂದ ಬಂದೂಕುಧಾರಿಯೊಬ್ಬ ಜನರ ಮೇಲೆ ಏಕಾಏಕಿ ಗುಂಡಿನ ಮಳೆಗರೆದಿದ್ದಾನೆ.
ಘಟನೆ ನಡೆದ ತಕ್ಷಣ ಕಾರ್ಯಾಚರಣೆ ನಡೆಸಿದ ಪೊಲೀಸರು ಕೃತ್ಯ ಎಸಗಿದ ಬಂದೂಕುಧಾರಿಯನ್ನು ಗುಂಡಿಕ್ಕಿ ಕೊಂದು ಪರಿಸ್ಥಿತಿ ನಿಯಂತ್ರಿಸಿದ್ದಾರೆ.