
ಕರ್ನಾಟಕದ ಎರಡು ಪದವೀಧರ ಹಾಗೂ ಎರಡು ಶಿಕ್ಷಕರ ಕ್ಷೇತ್ರಗಳಿಗೆ ದ್ವೈವಾರ್ಷಿಕ ಚುನಾವಣೆ ನಡೆಯಲಿದ್ದು, ಅಕ್ಟೋಬರ್ 23ರಂದು ಮತದಾನ ನಡೆಯಲಿದೆ.
ಆಗ್ನೇಯ ಪದವೀಧರ, ಪಶ್ಚಿಮ ಪದವೀಧರ, ಈಶಾನ್ಯ ಶಿಕ್ಷಕರ ಹಾಗೂ ಬೆಂಗಳೂರು ಶಿಕ್ಷಕರ ಕ್ಷೇತ್ರಗಳಿಗೆ ಅಕ್ಟೋಬರ್ 27ರಂದು ಮತ ಎಣಿಕೆ ನಡೆಯಲಿದೆ.
ಸೆಪ್ಟೆಂಬರ್ 29ರಂದು ಅಧಿಸೂಚನೆ ಹೊರಬೀಳಲಿದ್ದು, ಸಂಬಂಧಿತ ಕ್ಷೇತ್ರಗಳಲ್ಲಿ ತಕ್ಷಣದಿಂದಲೇ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದೆ.