
ಕಬ್ಬು ಬೆಳೆಗಾರರ ಬೇಡಿಕೆಗಳನ್ನು ಪರಿಹರಿಸಲು ಕೇಂದ್ರ ಸರ್ಕಾರ ಬದ್ಧವಾಗಿದ್ದು, ಎಂಎಸ್ಪಿ ಸೇರಿದಂತೆ ಪ್ರಮುಖ ವಿಷಯಗಳ ಬಗ್ಗೆ ಪರಿಶೀಲಿಸಲು ತಜ್ಞರ ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗಿದೆ.
ಕಳೆದ ವರ್ಷ 165 ಲೀಟರ್ ಎಥೆನಾಲ್ ಖರೀದಿಸಲಾಗಿದ್ದು, ಕಬ್ಬಿನಿಂದ ಬರುವ ಎಥೆನಾಲ್ ಪ್ರಮಾಣವನ್ನು ಹೆಚ್ಚುವರಿಯಾಗಿ ಖರೀದಿಸುವ ಕುರಿತು ಪೆಟ್ರೋಲಿಯಂ ಸಚಿವರೊಂದಿಗೆ ಚರ್ಚಿಸುವುದಾಗಿ ಸಚಿವ ಪ್ರಲ್ಹಾದ್ ಜೋಶಿ ಭರವಸೆ ನೀಡಿದ್ದಾರೆ.
ರೈತರು ಪ್ರತಿಭಟನೆ ಕೈಬಿಟ್ಟು ಮನೆಗೆ ತೆರಳುವಂತೆ ಮನವಿ ಮಾಡಿರುವ ಜೋಶಿ, ಮುಖ್ಯಮಂತ್ರಿಗಳು ರಾಜ್ಯ ಸಲಹಾ ಬೆಲೆ ಪರಿಗಣಿಸಬೇಕು ಹಾಗೂ ತೂಕ ಮತ್ತು ಕಟಾವಿನ ನಷ್ಟದ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದಿದ್ದಾರೆ.