
ನಿರ್ದೇಶಕ ಎಸ್.ಯು. ಅರುಣ್ ಕುಮಾರ್ ಅವರ ಹೊಸ ಸಿನಿಮಾದಲ್ಲಿ ನಟಿಸುತ್ತಿರುವ ಕಮಲ್ ಹಾಸನ್ ಅವರ ಲುಕ್ ಟೆಸ್ಟ್ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
ಸೆಪ್ಟೆಂಬರ್ 2ರಂದು ನಡೆದ ಲುಕ್ ಟೆಸ್ಟ್ ಬಳಿಕ ಚಿತ್ರತಂಡ ಈ ಫೋಟೋಗಳನ್ನು ಹಂಚಿಕೊಂಡಿದ್ದು, ಅಭಿಮಾನಿಗಳಲ್ಲಿ ನಿರೀಕ್ಷೆ ಹೆಚ್ಚಾಗಿದೆ.
ರಾಜ್ ಕಮಲ್ ಫಿಲ್ಮ್ಸ್ ಇಂಟರ್ನ್ಯಾಷನಲ್ ಮತ್ತು ಟರ್ಮರಿಕ್ ಮೀಡಿಯಾ ಸಂಸ್ಥೆಗಳು ಜಂಟಿಯಾಗಿ ಈ ಚಿತ್ರವನ್ನು ನಿರ್ಮಿಸುತ್ತಿವೆ.