
ಫುಟ್ಪಾತ್ಗಳ ಮೇಲೆ ಕಾರು ಅಥವಾ ದ್ವಿಚಕ್ರ ವಾಹನ ಚಲಾಯಿಸುವ ಸವಾರರಿಗೆ ವಿಧಿಸುತ್ತಿರುವ ಪ್ರಸ್ತುತ 500 ರೂ. ದಂಡವನ್ನು 5,000 ರೂ.ಗೆ ಹೆಚ್ಚಿಸಲು ರಾಜ್ಯ ಸರ್ಕಾರ ಯೋಜನೆ ರೂಪಿಸುತ್ತಿದೆ.
ಮೊದಲ ಬಾರಿ ನಿಯಮ ಉಲ್ಲಂಘಿಸಿದರೆ 5,000 ರೂ. ಹಾಗೂ ಎರಡನೇ ಬಾರಿ ಉಲ್ಲಂಘಿಸಿದರೆ 10,000 ರೂ. ದಂಡ ವಿಧಿಸುವ ಪ್ರಸ್ತಾವನೆ ಸಾರಿಗೆ ಇಲಾಖೆಯಿಂದ ಸಲ್ಲಿಕೆಯಾಗಿದೆ.
ರಸ್ತೆಗಳಲ್ಲಿ ಸಂಚಾರ ದಟ್ಟಣೆ ತಪ್ಪಿಸಿಕೊಳ್ಳಲು ಪಾದಚಾರಿ ಮಾರ್ಗಗಳನ್ನು ವಾಹನ ಸವಾರರು ದುರ್ಬಳಕೆ ಮಾಡಿಕೊಳ್ಳುವುದನ್ನು ತಡೆಯಲು ಈ ಕ್ರಮ ಕೈಗೊಳ್ಳಲಾಗುತ್ತಿದೆ.