
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಗೋಡೆಕೆರೆ ಗೇಟ್ ಬಳಿ ಎರಡು ಕಾರುಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರಲ್ಲಿ ಮೂರು ವರ್ಷದ ಮಗು ಮತ್ತು ತುರುವೇಕೆರೆ ಮೂಲದ ಚಾಲಕ ದಾವೂದ್ ಸೇರಿದ್ದು, ವೋಕ್ಸ್ವ್ಯಾಗನ್ ಹಾಗೂ ಕಿಯಾ ಸೋನೆಟ್ ಕಾರುಗಳ ನಡುವೆ ಈ ಅಪಘಾತ ನಡೆದಿದೆ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಉಳಿದ ನಾಲ್ವರ ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.