
ಅಮೆರಿಕದ ಫಿಲಡೆಲ್ಫಿಯಾದಲ್ಲಿ ನಡೆದ ಅಕ್ಕ ಬಿಸಿನೆಸ್ ಫೋರಂ-2026 ಸಮ್ಮೇಳನದಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಭಾರತದಲ್ಲಿ ಹೂಡಿಕೆ ಮಾಡುವಂತೆ ಕನ್ನಡಿಗರಿಗೆ ಕರೆ ನೀಡಿದರು.
ದೇಶದ ಕೈಗಾರಿಕಾ ಪ್ರಗತಿಗಾಗಿ ಪಿಎಂ ಇ-ಡ್ರೈವ್ ಯೋಜನೆಗೆ 10,900 ಕೋಟಿ ರೂ. ಹಾಗೂ ಉತ್ಪಾದನಾ ಉತ್ತೇಜನ ಯೋಜನೆಗೆ 25,938 ಕೋಟಿ ರೂ. ಮೀಸಲಿಡಲಾಗಿದೆ ಎಂದು ಸಚಿವರು ತಿಳಿಸಿದರು.
2030ರ ವೇಳೆಗೆ ವಾರ್ಷಿಕ 300 ಮಿಲಿಯನ್ ಟನ್ ಉಕ್ಕು ಉತ್ಪಾದಿಸುವ ಗುರಿ ಹೊಂದಿದ್ದು, ಇದಕ್ಕಾಗಿ 6,322 ಕೋಟಿ ರೂ. ಉತ್ತೇಜನ ಯೋಜನೆಯನ್ನು ರೂಪಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.