
ಫೇಮ್ ಇಂಡಿಯಾ ಮ್ಯಾಗಜೀನ್ ಮತ್ತು ಏಷ್ಯಾ ಪೋಸ್ಟ್ ಜಂಟಿಯಾಗಿ ನಡೆಸಿದ ಅತ್ಯುತ್ತಮ ಮುಖ್ಯಮಂತ್ರಿಗಳ ಸಮೀಕ್ಷೆಯಲ್ಲಿ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಮೊದಲ ಸ್ಥಾನ ಪಡೆದಿದ್ದಾರೆ.
1000 ಅಂಕಗಳ ಈ ಸಮೀಕ್ಷೆಯಲ್ಲಿ ಯೋಗಿ ಆದಿತ್ಯನಾಥ್ ಅವರು 897 ಅಂಕಗಳನ್ನು ಗಳಿಸಿ ಅಗ್ರಸ್ಥಾನದಲ್ಲಿದ್ದರೆ, ಉತ್ತರಾಖಂಡದ ಪುಷ್ಕರ್ ಸಿಂಗ್ ಧಾಮಿ ಎರಡನೇ ಹಾಗೂ ಅಸ್ಸಾಂನ ಹಿಮಂತ ಬಿಸ್ವಾ ಶರ್ಮಾ ಮೂರನೇ ಸ್ಥಾನದಲ್ಲಿದ್ದಾರೆ.
ಆಡಳಿತ ದಕ್ಷತೆ ಮತ್ತು ಮೌಲ್ಯಮಾಪನ ಅಂಶಗಳ ಕೊರತೆಯಿಂದಾಗಿ ಈ ಪಟ್ಟಿಯಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಯಾವುದೇ ಸ್ಥಾನ ದೊರೆತಿಲ್ಲ.