
ಉತ್ತರಪ್ರದೇಶದ ವೃಂದಾವನದ ಬಂಕೆ ಬಿಹಾರಿ ದೇವಾಲಯಕ್ಕೆ ಭಕ್ತರು ನೀಡುವ ಪ್ರತಿಯೊಂದು ಪೈಸೆ ದೇಣಿಗೆಯನ್ನು ನೇರವಾಗಿ ದೇವಾಲಯದ ಖಜಾನೆಗೆ ಜಮೆ ಮಾಡುವಂತೆ ಸುಪ್ರೀಂ ಕೋರ್ಟ್ ಕಟ್ಟುನಿಟ್ಟಿನ ಆದೇಶ ನೀಡಿದೆ.
ದೇಣಿಗೆ ಸಂಗ್ರಹದಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲು ಮತ್ತು ಅಕ್ರಮಗಳನ್ನು ತಡೆಯಲು ಉನ್ನತಾಧಿಕಾರ ಸಮಿತಿಗೆ ನಿರ್ದೇಶನ ನೀಡಲಾಗಿದ್ದು, ದೇಣಿಗೆಯನ್ನು ದುರುಪಯೋಗಪಡಿಸಿಕೊಳ್ಳುವವರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ ನೀಡಲಾಗಿದೆ.
ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಪೀಠವು, ದೇಣಿಗೆ ನಿಧಿಯಿಂದ ಆಸ್ತಿ ಖರೀದಿಸುವ ಯಾವುದೇ ಪ್ರಸ್ತಾವನೆಯನ್ನು ನ್ಯಾಯಾಲಯಕ್ಕೆ ತಿಳಿಸಬೇಕೆಂದು ದೇವಾಲಯದ ನಿರ್ವಹಣಾ ಸಮಿತಿಗೆ ಸೂಚಿಸಿದೆ.