
ಕೊಪ್ಪಳದ ಬನ್ನಿಕೊಪ್ಪ ಬಳಿ ಟಾಟಾ ಏಸ್ ವಾಹನಕ್ಕೆ ಬೈಕ್ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಬಳಿ ಟ್ರಕ್ ಡಿಕ್ಕಿಯಾಗಿ ಬಿಹಾರ ಮೂಲದ ಬಾಬುಜೀ ಮಿಯಾ (45) ಮೃತಪಟ್ಟಿದ್ದಾರೆ.
ದೊಡ್ಡಬಳ್ಳಾಪುರದ ಬಾಶೆಟ್ಟಹಳ್ಳಿ ಬಳಿ ಹಳಿ ಮೇಲಿದ್ದ ಮೇಕೆಗಳನ್ನು ರಕ್ಷಿಸಲು ಹೋದ ಅಶೋಕ್ (60) ಎಂಬ ಕುರಿಗಾಹಿ ರೈಲು ಡಿಕ್ಕಿಯಾಗಿ ಮೃತಪಟ್ಟಿದ್ದಾರೆ.
ಎಲೆಕ್ಟ್ರಾನಿಕ್ ಸಿಟಿ ಅಪಘಾತದ ಬಳಿಕ ಟ್ರಕ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಕುಕನೂರು ಮತ್ತು ಯಶವಂತಪುರ ರೈಲ್ವೆ ಪೊಲೀಸರು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.