
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ, ರಾಜ್ಯದ ಸಚಿವರ ಮೇಲೆ ವಿರೋಧ ಪಕ್ಷಗಳು ಖಾಸಗಿ ಏಜೆನ್ಸಿಗಳ ಮೂಲಕ ಸ್ಟಿಂಗ್ ಆಪರೇಷನ್ ನಡೆಸುತ್ತಿವೆ ಎಂದು ಸ್ಫೋಟಕ ಮಾಹಿತಿ ಬಹಿರಂಗಪಡಿಸಲಾಗಿದೆ.
ಗುಪ್ತಚರ ಇಲಾಖೆಯ ಮಾಹಿತಿಯಂತೆ ಹಾಲಿ 4-5 ಸಚಿವರನ್ನು ಬಲೆಗೆ ಬೀಳಿಸಲು ಯತ್ನಿಸಲಾಗುತ್ತಿದ್ದು, ಸಚಿವರು ತಮ್ಮ ಚಲನವಲನ ಹಾಗೂ ಮಾತನಾಡುವಾಗ ಅತ್ಯಂತ ಎಚ್ಚರಿಕೆಯಿಂದಿರಬೇಕು ಎಂದು ಸಿಎಂ ಸೂಚಿಸಿದ್ದಾರೆ.
ಸರ್ಕಾರಕ್ಕೆ ಮುಜುಗರ ತರುವಂತಹ ದಾಖಲೆಗಳನ್ನು ಕಲೆಹಾಕಲು ವಿಪಕ್ಷಗಳು ಈ ತಂತ್ರ ರೂಪಿಸಿದ್ದು, ಈಗಾಗಲೇ ಸ್ಟಿಂಗ್ಗೆ ಒಳಗಾಗಿರುವ ಸಂಭಾವ್ಯ ಸಚಿವರ ಪಟ್ಟಿಯನ್ನೂ ಮುಖ್ಯಮಂತ್ರಿಗಳು ಸಭೆಯಲ್ಲಿ ಪ್ರಸ್ತಾಪಿಸಿದ್ದಾರೆ.