ಮದ್ದೂರು ಮತ್ತು ಮಳವಳ್ಳಿ ತಾಲೂಕಿನಲ್ಲಿ ಮಳೆ ಕೊರತೆ ಮತ್ತು ಅಂತರ್ಜಲ ಕುಸಿತದಿಂದಾಗಿ ಸಾವಿರಾರು ಎಕರೆ ಪ್ರದೇಶದಲ್ಲಿ ಕಬ್ಬು ಬೆಳೆ ಒಣಗುತ್ತಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಕೆಆರ್‌ಎಸ್ ನೀರಾವರಿ ಸಲಹಾ ಸಮಿತಿಯ ನಿರ್ಧಾರದಂತೆ ನಾಲೆಗಳಿಗೆ ನೀರು ಹರಿಸದ ಕಾರಣ ಕೆರೆಗಳು ಬರಿದಾಗಿದ್ದು, ಕೃಷಿ ಪಂಪ್‌ಸೆಟ್‌ಗಳಿಗೂ ಸಮರ್ಪಕ ವಿದ್ಯುತ್ ಪೂರೈಕೆಯಾಗುತ್ತಿಲ್ಲ.
ಕ್ಯಾತಘಟ್ಟ, ಮೆಣಸಗೆರೆ ಮತ್ತು ಎಸ್.ಐ. ಹೊನ್ನಲಗೆರೆ ಸೇರಿದಂತೆ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬೆಳೆಗಳು ಒಣಗುತ್ತಿದ್ದು, ರೈತರು ಮಳೆಗಾಗಿ ಪ್ರಾರ್ಥಿಸುತ್ತಿದ್ದಾರೆ.