
ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ (FSSAI) ಲೂಸ್ ಅಡುಗೆ ಎಣ್ಣೆ ಮಾರಾಟದ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದ್ದು, ರಾಜ್ಯಾದ್ಯಂತ ಶೋಧ ಕಾರ್ಯವನ್ನು ತೀವ್ರಗೊಳಿಸಿದೆ.
ಪ್ಯಾಕಿಂಗ್ ದಿನಾಂಕ ಅಥವಾ ಕಂಪನಿಯ ವಿಳಾಸವಿಲ್ಲದ ಎಣ್ಣೆಯಲ್ಲಿ ರಾಸಾಯನಿಕ ಕಲಬೆರಕೆ ಮಾಡುವ ಸಾಧ್ಯತೆ ಇರುವುದರಿಂದ, ಇಂತಹ ಎಣ್ಣೆಯ ಬಳಕೆಯು ಕ್ಯಾನ್ಸರ್ ಮತ್ತು ಹೃದಯ ಸಂಬಂಧಿ ಕಾಯಿಲೆಗಳಿಗೆ ಕಾರಣವಾಗಬಹುದು ಎಂದು ಎಚ್ಚರಿಸಲಾಗಿದೆ.
ಈ ಕುರಿತು ವರದಿ ನೀಡಲು ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗಿದ್ದು, ಸಮಿತಿಯ ಶಿಫಾರಸಿನ ಆಧಾರದ ಮೇಲೆ ರಾಜ್ಯದಲ್ಲಿ ಲೂಸ್ ಅಡುಗೆ ಎಣ್ಣೆ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲು ಸರ್ಕಾರ ನಿರ್ಧರಿಸಿದೆ.