
ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ 165 ರನ್ ಅಂತರದ ಗೆಲುವು ಸಾಧಿಸಿದ್ದು, ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿದೆ.
ಮಾನವ್ ಸುತಾರ್ ಪಂದ್ಯದಲ್ಲಿ ಒಟ್ಟು 10 ವಿಕೆಟ್ ಪಡೆದರೂ, ಕಠಿಣ ಪಿಚ್‌ನಲ್ಲಿ ಮೊದಲ ಇನ್ನಿಂಗ್ಸ್‌ನಲ್ಲಿ 167 ರನ್ ಬಾರಿಸಿದ ದೇವದತ್ ಪಡಿಕ್ಕಲ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.
ಪಡಿಕ್ಕಲ್ ಅವರು ಕೆಎಲ್ ರಾಹುಲ್ ಅವರೊಂದಿಗೆ 162 ರನ್ ಮತ್ತು ಪಂತ್ ಅವರೊಂದಿಗೆ 71 ರನ್‌ಗಳ ಜೊತೆಯಾಟದ ಮೂಲಕ ತಂಡವು ಮೊದಲ ಇನ್ನಿಂಗ್ಸ್‌ನಲ್ಲಿ 462 ರನ್ ಗಳಿಸಲು ನೆರವಾದರು.