
ಭಾರತದ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್ 12-13ರಂದು ನವದೆಹಲಿಯ ಭಾರತ ಮಂಟಪದಲ್ಲಿ ನಡೆಯಲಿರುವ ಬ್ರಿಕ್ಸ್ ಶೃಂಗಸಭೆಗೆ ಸಿದ್ಧತೆಗಳು ಅಂತಿಮ ಹಂತಕ್ಕೆ ತಲುಪಿವೆ.
ಚೀನಾ ಅಧ್ಯಕ್ಷ ಷಿ ಜಿನ್ಪಿಂಗ್, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಸೇರಿದಂತೆ ಇರಾನ್, ದಕ್ಷಿಣ ಆಫ್ರಿಕಾ ಮತ್ತು ಇಂಡೋನೇಷ್ಯಾದ ನಾಯಕರು ಈ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ.
2024ರಲ್ಲಿ ಈಜಿಪ್ಟ್, ಇಥಿಯೋಪಿಯ, ಇರಾನ್, ಯುಎಇ ಮತ್ತು ಸೌದಿ ಅರೇಬಿಯಾ ದೇಶಗಳು ಬ್ರಿಕ್ಸ್ ಒಕ್ಕೂಟಕ್ಕೆ ಸೇರ್ಪಡೆಯಾಗಿದ್ದು, 2025ರಲ್ಲಿ ಇಂಡೋನೇಷ್ಯಾ ಸದಸ್ಯತ್ವ ಪಡೆದಿದೆ.