
ವರಮಹಾಲಕ್ಷ್ಮಿ ಹಬ್ಬ ಮತ್ತು ಸಾಲು ಸಾಲು ರಜೆಗಳ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಸ್ವಂತ ಊರುಗಳಿಗೆ ತೆರಳುವವರ ಸಂಖ್ಯೆ ಹೆಚ್ಚಾಗಿದ್ದು, ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಜನಜಂಗುಳಿ ಉಂಟಾಗಿದೆ.
ಮಂಗಳೂರು, ಶಿವಮೊಗ್ಗ, ಹುಬ್ಬಳ್ಳಿ, ಬೆಳಗಾವಿ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಗೆ ತೆರಳುವ ಕೆಎಸ್‌ಆರ್‌ಟಿಸಿ ಮತ್ತು ಖಾಸಗಿ ಬಸ್‌ಗಳಿಗೆ ಭಾರಿ ಬೇಡಿಕೆ ಸೃಷ್ಟಿಯಾಗಿದೆ.
ಪ್ರಯಾಣಿಕರ ದಟ್ಟಣೆಯನ್ನು ನಿಭಾಯಿಸಲು ಕೆಎಸ್‌ಆರ್‌ಟಿಸಿ ಮತ್ತು ಇತರ ಸಾರಿಗೆ ಸಂಸ್ಥೆಗಳು ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಿದ್ದು, ಖಾಸಗಿ ಬಸ್‌ಗಳಲ್ಲಿ ಟಿಕೆಟ್ ದರ ತುಸು ಏರಿಕೆಯಾಗಿದೆ.