
ನೇಪಾಳದ ನುವಾಕೋಟ್ ಜಿಲ್ಲೆಯ ಬೆತ್ರಾವತಿ ಗ್ರಾಮದಲ್ಲಿ ಪ್ರವಾಹಕ್ಕೆ ಸಿಲುಕಿದ ಮನೆಯೊಂದರಿಂದ 23 ಮೃತದೇಹಗಳನ್ನು ರಕ್ಷಣಾ ಪಡೆಗಳು ಹೊರತೆಗೆದಿದ್ದು, ದೇಶಾದ್ಯಂತ ಸಾವಿನ ಸಂಖ್ಯೆ ಸಾವಿರದ ಗಡಿ ತಲುಪಿದೆ.
ರಸುವಾ ಜಿಲ್ಲೆಯ ಉತ್ತರಗಯಾದಲ್ಲಿ 350ಕ್ಕೂ ಹೆಚ್ಚು ವಿದ್ಯಾರ್ಥಿಗಳು, ತ್ರಿಶೂಲಿ ಜಲವಿದ್ಯುತ್ ಯೋಜನೆಯ ನೂರಾರು ಕಾರ್ಮಿಕರು ಸೇರಿದಂತೆ ಒಟ್ಟು 4,000ಕ್ಕೂ ಅಧಿಕ ಜನರು ನಾಪತ್ತೆಯಾಗಿದ್ದಾರೆ.
ಭಾರತೀಯ ರಕ್ಷಣಾ ಪಡೆಗಳು ನೇಪಾಳ ಸೇನೆಯೊಂದಿಗೆ ಜಂಟಿ ಕಾರ್ಯಾಚರಣೆ ನಡೆಸುತ್ತಿದ್ದು, ಗಂಡಕ್ ನದಿಯ ಮೂಲಕ ಉತ್ತರ ಪ್ರದೇಶದ ಕುಶಿನಗರ ಗಡಿಯಲ್ಲಿ 13 ಮೃತದೇಹಗಳು ಪತ್ತೆಯಾಗಿವೆ.