
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಇಂದಿರಾ ನಗರದಲ್ಲಿ ಆಗಸ್ಟ್ 2ರಂದು ತಡರಾತ್ರಿ 2:30ರ ಸುಮಾರಿಗೆ ಸಂಭವಿಸಿದ ಗುಡ್ಡ ಕುಸಿತದಲ್ಲಿ ಒಂದೇ ಕುಟುಂಬದ ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ.
ಮೃತರನ್ನು ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಕೊಕ್ಕರೆಗಾರು ಗ್ರಾಮದ ಮಲ್ಲಿಕಾರ್ಜುನ (35), ನಾಗವೇಣಿ (28) ಮತ್ತು ಸಂತೋಷ (3) ಎಂದು ಗುರುತಿಸಲಾಗಿದ್ದು, ಘಟನೆಯಲ್ಲಿ ಇತರರಿಗೆ ಗಂಭೀರ ಗಾಯಗಳಾಗಿವೆ.
ಪೊಲೀಸ್ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಮಣ್ಣಿನಡಿ ಸಿಲುಕಿದ್ದ ಶವಗಳನ್ನು ಹೊರತೆಗೆದಿದ್ದು, ಗಾಯಾಳುಗಳನ್ನು ಚಿಕಿತ್ಸೆಗಾಗಿ ತೀರ್ಥಹಳ್ಳಿಯ ಜಯಚಾಮರಾಜೇಂದ್ರ ಆಸ್ಪತ್ರೆಗೆ ದಾಖಲಿಸಲಾಗಿದೆ.