
ಬಾಗಲಕೋಟೆ ಜಿಲ್ಲೆಯ ಬಸವಣ್ಣನವರ ಐಕ್ಯ ಸ್ಥಳವಾದ ಕೂಡಲಸಂಗಮದಲ್ಲಿ ಅನ್ಯಕೋಮಿನವರು ಮಾಂಸಾಹಾರ ಸೇವಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಪಾವಿತ್ರ್ಯ ಸ್ಥಳದಲ್ಲಿ ಮಾಂಸಾಹಾರ ಸೇವಿಸಿ ಹಿಂದೂಗಳ ಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ರಾಜ್ಯ ಬಿಜೆಪಿ ಮತ್ತು ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜಿಲ್ಲಾಡಳಿತವು ಇದನ್ನು ಸಾರ್ವಜನಿಕ ಉಪಟಳವೆಂದು ಪರಿಗಣಿಸಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಹಾಗೂ ನಿಯಮಾವಳಿ ರೂಪಿಸಬೇಕೆಂದು ಒತ್ತಾಯಿಸಲಾಗಿದೆ.