
ನಟಿ ಶಾಲಿನಿ ಪಾಂಡೆ ಅವರ ಹೆಸರಿನಲ್ಲಿ ಎಐ ತಂತ್ರಜ್ಞಾನ ಬಳಸಿ ಸೃಷ್ಟಿಸಲಾದ ನಕಲಿ ವಿಡಿಯೋ ವೈರಲ್ ಆಗಿದ್ದು, ನಟಿ ಇದನ್ನು ಖಂಡಿಸಿ ಇನ್ಸ್ಟಾಗ್ರಾಮ್ನಲ್ಲಿ ಸ್ಪಷ್ಟನೆ ನೀಡಿದ್ದಾರೆ.
2017ರ 'ಅರ್ಜುನ್ ರೆಡ್ಡಿ' ಚಿತ್ರದ ಮೂಲಕ ಖ್ಯಾತಿ ಪಡೆದ ಶಾಲಿನಿ, ಇಂತಹ ತಂತ್ರಜ್ಞಾನದ ದುರ್ಬಳಕೆಯನ್ನು ತಡೆಯಲು ಕಠಿಣ ನಿಯಮಗಳನ್ನು ತರಬೇಕೆಂದು ಸರ್ಕಾರವನ್ನು ಆಗ್ರಹಿಸಿದ್ದಾರೆ.
ನಟಿ ಈ ವಿಡಿಯೋವನ್ನು ವೀಕ್ಷಿಸುವವರು ತಕ್ಷಣವೇ ರಿಪೋರ್ಟ್ ಮಾಡುವಂತೆ ಅಭಿಮಾನಿಗಳಲ್ಲಿ ಮನವಿ ಮಾಡಿದ್ದು, ನೆಟ್ಟಿಗರು ನಟಿಯ ಬೆಂಬಲಕ್ಕೆ ನಿಂತಿದ್ದಾರೆ.