
ಬಿಟ್ ಕಾಯಿನ್ ಹಗರಣದಲ್ಲಿ ಹಣ ಅಕ್ರಮ ವರ್ಗಾವಣೆ ಆರೋಪದಡಿ ಬಂಧಿತರಾಗಿದ್ದ ಹ್ಯಾಕರ್ ಶ್ರೀಕೃಷ್ಣ ರಮೇಶ್ ಅಲಿಯಾಸ್ ಶ್ರೀಕಿ ಹಾಗೂ ಕ್ರಿಪ್ಟೊ ಟ್ರೇಡರ್ ರಾಬಿನ್ ಖಂಡೇಲ್‌ವಾಲ ಅವರಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
2026ರ ಮೇ 8ರಂದು ಬಂಧನಕ್ಕೊಳಗಾಗಿದ್ದ ಇಬ್ಬರು ಆರ、್ತಿಗಳು ಸಲ್ಲಿಸಿದ್ದ ಪ್ರತ್ಯೇಕ ಅರ್ಜಿಗಳನ್ನು ನ್ಯಾಯಮೂರ್ತಿ ಎಸ್.ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ಪುರಸ್ಕರಿಸಿದೆ.
ಅರ್ಜಿದಾರರಿಂದ ಏನನ್ನೂ ಜಪ್ತಿ ಮಾಡಲಾಗಿಲ್ಲ ಮತ್ತು ಇ.ಡಿ ಸಮನ್ಸ್‌ಗೆ ಹಾಜರಾಗಿ ಸಹಕರಿಸಿದ್ದಾರೆ ಎಂದು ವಕೀಲರು ವಾದಿಸಿದ್ದು, ಅದನ್ನು ನ್ಯಾಯಪೀಠ ಮಾನ್ಯ ಮಾಡಿದೆ.