ಕೆಪಿಎಸ್ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರ ಮನೆಯಲ್ಲಿ ಬಿ.ಎಸ್. ಯಡಿಯೂರಪ್ಪ ಮತ್ತು ಬಿ.ವೈ. ವಿಜಯೇಂದ್ರ ಅವರ ಫೋಟೋಗಳಿರುವುದನ್ನು ಉಲ್ಲೇಖಿಸಿ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನೆಗಳನ್ನು ಕೇಳಿದ್ದಾರೆ.
ಶಾಸಕ ಬಸನಗೌಡ ಯತ್ನಾಳ್ ಅವರು ಕೆಪಿಎಸ್ಸಿ ಮಾಜಿ ಅಧ್ಯಕ್ಷರು ಯಡಿಯೂರಪ್ಪ ಕುಟುಂಬದ ಸಂಬಂಧಿ ಎಂದು ಆರೋಪಿಸಿದ ಬೆನ್ನಲ್ಲೇ ಈ ರಾಜಕೀಯ ವಾಕ್ಸಮರ ತೀವ್ರಗೊಂಡಿದೆ.
ಬಿಜೆಪಿ ಸರ್ಕಾರವೇ ನೇಮಿಸಿದ್ದ ಕೆಪಿಎಸ್ಸಿ ಅಧ್ಯಕ್ಷನ ಅಕ್ರಮಗಳಲ್ಲಿ ವಿಜಯೇಂದ್ರ ಪಾಲುದಾರರೇ ಎಂದು ಪ್ರಿಯಾಂಕ್ ಖರ್ಗೆ ಸವಾಲು ಹಾಕಿದ್ದು, ಈ ಹಗರಣಗಳ ಮೂಲ ಬಿಜೆಪಿಯ ಬಾಗಿಲಿಗೆ ಬಂದು ನಿಲ್ಲುತ್ತದೆ ಎಂದು ಆರೋಪಿಸಿದ್ದಾರೆ.