Health & Environment
ಬೆಂಗಳೂರಿನಲ್ಲಿ ಹಿಂದಿ ಮಾತನಾಡದ ಡೆಲಿವರಿ ಬಾಯ್ ಮೇಲೆ ಹಲ್ಲೆ

ಬೆಂಗಳೂರಿನಲ್ಲಿ ಹಿಂದಿ ಮಾತನಾಡದ ಡೆಲಿವರಿ ಬಾಯ್ ಮೇಲೆ ಹಲ್ಲೆ

tv9kannada1h
THE BRIEF
1

ಬೆಂಗಳೂರಿನ ಯಲಹಂಕ ನ್ಯೂ ಟೌನ್‌ನಲ್ಲಿ ಇಂದು ಮುಂಜಾನೆ 4 ಗಂಟೆಗೆ ಹಿಂದಿ ಮಾತನಾಡಲಿಲ್ಲ ಎಂಬ ಕಾರಣಕ್ಕೆ ಫುಡ್ ಡೆಲಿವರಿ ಬಾಯ್ ಮೇಲೆ ಮೂವರು ಹಲ್ಲೆ ನಡೆಸಿದ್ದಾರೆ.

2

ಒಬ್ಬ ಯುವತಿ ಹಾಗೂ ಇಬ್ಬರು ಯುವಕರು ಸೇರಿ ನಡುರಸ್ತೆಯಲ್ಲೇ ಡೆಲಿವರಿ ಬಾಯ್ ಮುಖಕ್ಕೆ ಪಂಚ್ ಮಾಡಿದ್ದು, ಈ ದೃಶ್ಯಗಳು ಸ್ಥಳೀಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.

3

ಹಲ್ಲೆಗೊಳಗಾದ ಯುವಕ ನೀಡಿದ ದೂರಿನ ಮೇರೆಗೆ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.