
ತುರ್ತು ಪರಿಸ್ಥಿತಿ ವೇಳೆ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ಕಡಿತಗೊಳಿಸಲಾಗಿದ್ದರೂ ಅದನ್ನು ಸಾಂವಿಧಾನಿಕವಾಗಿಯೇ ಮಾಡಲಾಗಿತ್ತು ಎಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ತಿಳಿಸಿದ್ದಾರೆ.
ಅಂದಿನ ಅಶಾಂತಿ ಮತ್ತು ಹದಗೆಡುತ್ತಿದ್ದ ಪರಿಸ್ಥಿತಿಯನ್ನು ನಿಭಾಯಿಸಲು ಇಂದಿರಾ ಗಾಂಧಿಗೆ ತುರ್ತು ಪರಿಸ್ಥಿತಿ ಜಾರಿಗೊಳಿಸುವ ಅನಿವಾರ್ಯತೆ ಎದುರಾಗಿತ್ತು ಎಂದು ಅವರು ಹೇಳಿದ್ದಾರೆ.
ನಂತರದ ದಿನಗಳಲ್ಲಿ ಇಂದಿರಾ ಗಾಂಧಿಯವರೇ ತುರ್ತು ಪರಿಸ್ಥಿತಿಯ ಅತಿರೇಕಗಳಿಗಾಗಿ ಸಾರ್ವಜನಿಕವಾಗಿ ವಿಷಾದ ವ್ಯಕ್ತಪಡಿಸಿ ಕ್ಷಮೆಯಾಚಿಸಿದ್ದರು ಎಂದು ಅವರು ತಮ್ಮ ಸಂದರ್ಶನದಲ್ಲಿ ತಿಳಿಸಿದ್ದಾರೆ.