ಮಲೆನಾಡಿನಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ತುಂಗಭದ್ರಾ ಜಲಾಶಯಕ್ಕೆ ಮಂಗಳವಾರ ಮಧ್ಯಾಹ್ನ 1 ಲಕ್ಷ ಕ್ಯೂಸೆಕ್ ನೀರು ಹರಿದುಬರುತ್ತಿದೆ.
ಜಲಾಶಯದ ಒಟ್ಟು 105.78 ಟಿಎಂಸಿ ಸಾಮರ್ಥ್ಯದ ಪೈಕಿ ಸದ್ಯ 52.89 ಟಿಎಂಸಿ ನೀರು ಸಂಗ್ರಹವಾಗಿದ್ದು, ನೀರಿನ ಮಟ್ಟ ಶೇ 50ರಷ್ಟು ತಲುಪಿದೆ.
ಜಲಾಶಯದ ಗರಿಷ್ಠ ಮಟ್ಟ 1633 ಅಡಿಗಳಾಗಿದ್ದು, ಪ್ರಸ್ತುತ 1617 ಅಡಿ ನೀರು ಸಂಗ್ರಹವಾಗಿದೆ ಎಂದು ಜಲಸಂಪನ್ಮೂಲ ಇಲಾಖೆ ಮಾಹಿತಿ ನೀಡಿದೆ.