
ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ನಾಗರಿಕ ಸೇವೆಗಳ ನೇಮಕಾತಿಯಲ್ಲಿ ಶೇ.2ರಷ್ಟು ಮೀಸಲಾತಿ ಕಲ್ಪಿಸಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ.
ಅರಣ್ಯ ಮತ್ತು ಪೊಲೀಸ್ ಇಲಾಖೆಗಳಲ್ಲಿ ಕ್ರೀಡಾಪಟುಗಳಿಗೆ ಶೇ.3ರಷ್ಟು ಮೀಸಲಾತಿ ನೀಡಲಾಗಿದೆ.
ಕನಿಷ್ಠ 10 ವರ್ಷ ಕರ್ನಾಟಕದಲ್ಲಿ ವಾಸವಿದ್ದು, ರಾಷ್ಟ್ರೀಯ ಅಥವಾ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ರಾಜ್ಯವನ್ನು ಪ್ರತಿನಿಧಿಸಿದ ಕ್ರೀಡಾಪಟುಗಳು ಇದರ ಪ್ರಯೋಜನ ಪಡೆಯಲಿದ್ದಾರೆ.