
ಬೆಂಗಳೂರಿನ ಗಾಂಧಿನಗರದಲ್ಲಿ ಟ್ರಾಲಿ ಬ್ಯಾಗ್ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳನ್ನು ಡಿಆರ್ಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಆರೋಪಿಯು ಪ್ರತಿ ಆಮೆಯನ್ನು 10 ಸಾವಿರ ರೂಪಾಯಿಗೆ ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ದಾಳಿ ನಡೆಸಲಾಗಿದ್ದು, ಈ ಆಮೆಗಳನ್ನು ಕಲಾಸಿಪಾಳ್ಯದಿಂದ ತರಲಾಗಿತ್ತು ಎಂದು ತಿಳಿದುಬಂದಿದೆ.
ಅದೃಷ್ಟ ತರುತ್ತವೆ ಎಂದು ಜನರನ್ನು ನಂಬಿಸಿ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ವಿಚಾರಣೆ ನಡೆಸಲಾಗುತ್ತಿದೆ.