
2018ಕ್ಕಿಂತ ಮುಂಚಿತವಾಗಿ ಆರಂಭವಾಗಿರುವ ಖಾಸಗಿ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ ಮಾನ್ಯತೆ ನವೀಕರಣ ನಿಯಮ ಸಡಿಲಿಕೆ ಕುರಿತು ಪರಿಶೀಲಿಸಲು ರಚಿಸಲಾದ ವಿಶೇಷ ಸದನ ಸಮಿತಿಯ ಮಧ್ಯಂತರ ವರದಿಯನ್ನು ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಅವರು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರಿಗೆ ಬುಧವಾರ ಸಲ್ಲಿಸಿದ್ದಾರೆ.
ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ವರದಿಯನ್ನು ಹಸ್ತಾಂತರಿಸಲಾಗಿದ್ದು, ನಿಯಮ ಸಡಿಲಿಕೆಗೆ ಸಂಬಂಧಿಸಿದ ಶಿಫಾರಸುಗಳನ್ನು ಇದು ಒಳಗೊಂಡಿದೆ.
ಸಚಿವರು ಈ ವರದಿಯನ್ನು ಪರಿಶೀಲಿಸಿ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದ್ದು, ಖಾಸಗಿ ಶಾಲೆಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ದೊರೆಯುವ ನಿರೀಕ್ಷೆಯಿದೆ.