
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಗೆ ಸಂಪರ್ಕ ಕಲ್ಪಿಸುವ ಹಲವು ಕಡೆಗಳ ಎಂಟ್ರಿ ಮತ್ತು ಎಕ್ಸಿಟ್ ಪಾಯಿಂಟ್ಗಳನ್ನು ಮುಚ್ಚುತ್ತಿರುವುದು ಸ್ಥಳೀಯ ವಾಹನ ಸವಾರರ ಆಕ್ರೋಶಕ್ಕೆ ಕಾರಣವಾಗಿದೆ.
ಈ ಮಾರ್ಗದಲ್ಲಿ ಪ್ರವೇಶ ಹಾಗೂ ನಿರ್ಗಮನ ದ್ವಾರಗಳನ್ನು ಬಂದ್ ಮಾಡಿರುವುದರಿಂದ ಸ್ಥಳೀಯರು ಸರ್ವಿಸ್ ರಸ್ತೆಯಲ್ಲೇ ಸಂಚರಿಸಬೇಕಾದ ಅನಿವಾರ್ಯತೆ ಎದುರಾಗಿದೆ.
ಸರ್ವಿಸ್ ರಸ್ತೆಗಳಲ್ಲಿ ಗುಂಡಿಗಳು ಮತ್ತು ಹಂಪ್ಸ್ಗಳಿರುವುದರಿಂದ ಪ್ರಯಾಣದ ಅವಧಿ ಹೆಚ್ಚುತ್ತಿದ್ದು, ಸ್ಥಳೀಯರಿಗೆ ಅನುಕೂಲವಾಗುವಂತೆ ಟೋಲ್ ಪಾಯಿಂಟ್ಗಳನ್ನು ನಿರ್ಮಿಸಿ ಶುಲ್ಕ ಸಂಗ್ರಹಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.