
2028ಕ್ಕೆ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಬರುವುದು ಶತಃಸಿದ್ಧ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹಾಸನದಲ್ಲಿ ತಿಳಿಸಿದ್ದಾರೆ.
ಸಿದ್ದರಾಮಯ್ಯ ಇಲ್ಲದಿದ್ದರೆ ಕಾಂಗ್ರೆಸ್ ಯಾವಾಗೋ ಮುಗಿದುಹೋಗುತ್ತಿತ್ತು ಎಂದು ಹೇಳಿರುವ ಅವರು, ಕೆಪಿಎಸ್ಸಿ ಹಗರಣದ ಕುರಿತು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಕುಮಾರಸ್ವಾಮಿ ಅವರ ಆರೋಪಕ್ಕೆ ಪ್ರತಿಕ್ರಿಯಿಸಿರುವ ಸಚಿವ ಪ್ರಿಯಾಂಕ್ ಖರ್ಗೆ, ತಾನು ಯಾರಿಂದಲೂ ನಿರ್ದೇಶನ ಪಡೆದು ಮಾತನಾಡಲ್ಲ ಎಂದು ತಿರುಗೇಟು ನೀಡಿದ್ದಾರೆ.