
ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್ಬುಕ್ಗಳನ್ನು ವಿತರಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ.
ರಾಜ್ಯಾದ್ಯಂತ 1,000 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಅಭಿವೃದ್ಧಿಪಡಿಸಲು ಏಷ್ಯನ್ ಡೆವಲಪ್ಮೆಂಟ್ ಬ್ಯಾಂಕ್ 1,750 ಕೋಟಿ ರೂ. ನೆರವು ನೀಡಿದ್ದು, ಸರ್ಕಾರವು 750 ಕೋಟಿ ರೂ. ಮೀಸಲಿಟ್ಟಿದೆ.
ಶಿವಮೊಗ್ಗದಲ್ಲಿ 13.50 ಕೋಟಿ ರೂ. ದೇಣಿಗೆಯೊಂದಿಗೆ ನಿರ್ಮಾಣವಾಗುತ್ತಿರುವ ನೂತನ ಶಾಲಾ ಕಟ್ಟಡದ ಕಾಮಗಾರಿಯನ್ನು ಒಂದು ವರ್ಷದೊಳಗೆ ಪೂರ್ಣಗೊಳಿಸಲು ಗುರಿ ಹೊಂದಲಾಗಿದೆ.