
ಬೆಂಗಳೂರಿನ ವಿಜಯನಗರ, ಮಲ್ಲೇಶ್ವರಂ, ಮೆಜೆಸ್ಟಿಕ್ ಸೇರಿದಂತೆ ಹಲವೆಡೆ ಇಂದು ಸಂಜೆ ಧಾರಾಕಾರ ಮಳೆಯಾಗಿದ್ದು, ಪಾದಚಾರಿಗಳು ಮತ್ತು ದ್ವಿಚಕ್ರ ವಾಹನ ಸವಾರರು ತೀವ್ರ ತೊಂದರೆ ಅನುಭವಿಸಿದರು.
ಮಳೆಯಿಂದಾಗಿ ನೆಲಮಂಗಲ-ಹಾಸನ ರಾಷ್ಟ್ರೀಯ ಹೆದ್ದಾರಿಯ ಕೆಂಪಲಿಂಗನಹಳ್ಳಿ ಬಳಿ ಕಾರೊಂದು ಡಿವೈಡರ್ಗೆ ಡಿಕ್ಕಿ ಹೊಡೆದಿದ್ದು, ಗಂಭೀರವಾಗಿ ಗಾಯಗೊಂಡ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ನಗರದ ಪ್ರಮುಖ ರಸ್ತೆಗಳು ಮತ್ತು ಅಂಡರ್ಪಾಸ್ಗಳಲ್ಲಿ ಮಳೆ ನೀರು ನಿಂತಿದ್ದರಿಂದ ಸಂಚಾರ ದಟ್ಟಣೆ ಉಂಟಾಗಿದ್ದು, ವಾಹನ ಸವಾರರು ಪರದಾಡುವಂತಾಯಿತು.