
ಕೊತ್ತಂಬರಿ ಬೀಜದ ನೀರನ್ನು ರಾತ್ರಿ ಮಲಗುವ ಮುನ್ನ ಕುಡಿಯುವುದರಿಂದ ಜೀರ್ಣಕ್ರಿಯೆ ಸುಧಾರಿಸುತ್ತದೆ ಮತ್ತು ದೇಹದ ತೂಕ ಇಳಿಸಿಕೊಳ್ಳಲು ಸಹಕಾರಿಯಾಗುತ್ತದೆ.
ಈ ನೀರಿನಲ್ಲಿ ಪೊಟ್ಯಾಸಿಯಮ್, ವಿಟಮಿನ್ ಸಿ ಮತ್ತು ಕೆ ಹಾಗೂ ಆಂಟಿಆಕ್ಸಿಡೆಂಟ್‌ಗಳಿದ್ದು, ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ.
ಕೊತ್ತಂಬರಿ ಬೀಜದ ನೀರು ದೇಹವನ್ನು ನಿರ್ವಿಷಗೊಳಿಸಿ, ಒತ್ತಡವನ್ನು ಕಡಿಮೆ ಮಾಡುವ ಮೂಲಕ ಉತ್ತಮ ನಿದ್ರೆ ಪಡೆಯಲು ನೆರವಾಗುತ್ತದೆ ಎಂದು ತಜ್ಞರು ತಿಳಿಸಿದ್ದಾರೆ.