
ಸೀನಿಯರ್ ಮಹಿಳೆಯರ ಟಿ20 ಟ್ರೋಫಿ ಪಂದ್ಯದಲ್ಲಿ ಉತ್ತರಾಖಂಡ್ ತಂಡವನ್ನು ಪ್ರತಿನಿಧಿಸುತ್ತಿರುವ ಆರ್ಸಿಬಿ ಆಟಗಾರ್ತಿ ಪ್ರೇಮಾ ರಾವತ್ ಕೇವಲ 14 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ಮಹಿಳಾ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತ್ಯಂತ ವೇಗದ ಅರ್ಧಶತಕದ ವಿಶ್ವ ದಾಖಲೆ ನಿರ್ಮಿಸಿದ್ದಾರೆ.
ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ 357ರ ಸ್ಟ್ರೈಕ್ ರೇಟ್ನಲ್ಲಿ ಬ್ಯಾಟ್ ಬೀಸಿದ 24 ವರ್ಷದ ಪ್ರೇಮಾ ರಾವತ್, 6 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ ಅಜೇಯ 50 ರನ್ ಗಳಿಸಿ ಪಾಕಿಸ್ತಾನದ ಫಾತಿಮಾ ಸನಾ ಅವರ ದಾಖಲೆಯನ್ನು ಮುರಿದರು.
ಬ್ಯಾಟಿಂಗ್ ಮಾತ್ರವಲ್ಲದೆ ಬೌಲಿಂಗ್ನಲ್ಲೂ ಮಿಂಚಿದ ಅವರು 4 ಓವರ್ಗಳಲ್ಲಿ 12 ನೀಡಿ 2 ವಿಕೆಟ್ ಕಬಳಿಸುವ ಮೂಲಕ ಉತ್ತರಾಖಂಡ್ ತಂಡದ 89 ರನ್ಗಳ ಗೆಲುವಿಗೆ ಪ್ರಮುಖ ಕಾರಣರಾದರು.