
ರಾಮನಗರದ ಶಾಂತಿಲಾಲ್ ಲೇಔಟ್ನಲ್ಲಿ ನಿರ್ಮಾಣ ಹಂತದ ಮನೆಯೊಂದರಲ್ಲಿ ಅಕ್ರಮವಾಗಿ ಖೋಟಾ ನೋಟು ಮುದ್ರಿಸುತ್ತಿದ್ದ ಐವರನ್ನು ಐಜೂರು ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳು ವಿಶೇಷ ಕಾಗದ ಮತ್ತು ರಾಸಾಯನಿಕಗಳನ್ನು ಬಳಸಿ 200 ಹಾಗೂ 500 ರೂಪಾಯಿ ಮುಖಬೆಲೆಯ ನಕಲಿ ನೋಟುಗಳನ್ನು ಮುದ್ರಿಸಿ ಮಾರಾಟ ಮಾಡುತ್ತಿದ್ದರು.
ಘಟನಾ ಸ್ಥಳಕ್ಕೆ ಭೇಟಿ ನೀಡಿದ ವಿಧಿವಿಜ್ಞಾನ ಮತ್ತು ಬೆರಳಚ್ಚು ತಜ್ಞರ ತಂಡವು ನೋಟು ಮುದ್ರಣಕ್ಕೆ ಬಳಸಿದ್ದ ರಾಸಾಯನಿಕಗಳು ಮತ್ತು ಕಾಗದದ ಶೀಟ್ಗಳನ್ನು ವಶಕ್ಕೆ ಪಡೆದುಕೊಂಡಿದೆ.