
ಐಪಿಎಲ್ 2027ರ ಹರಾಜಿಗೂ ಮುನ್ನ ಫ್ರಾಂಚೈಸಿಗಳ ನಡುವೆ ಆಟಗಾರರ ಟ್ರೇಡಿಂಗ್ ಚಟುವಟಿಕೆಗಳು ಗರಿಗೆದರಿದ್ದು, ಲಿಯಾಮ್ ಲಿವಿಂಗ್ಸ್ಟೋನ್ ಹೆಸರು ಮುನ್ನೆಲೆಗೆ ಬಂದಿದೆ.
ಸನ್ರೈಸರ್ಸ್ ಹೈದರಾಬಾದ್ ತಂಡವು ಕಳೆದ ಹರಾಜಿನಲ್ಲಿ 13 ಕೋಟಿ ರೂ. ನೀಡಿ ಖರೀದಿಸಿದ್ದ ಇಂಗ್ಲೆಂಡ್ ಆಲ್ರೌಂಡರ್ ಲಿಯಾಮ್ ಲಿವಿಂಗ್ಸ್ಟೋನ್ ಅವರನ್ನು ತಮ್ಮ ತಂಡಕ್ಕೆ ಸೇರಿಸಿಕೊಳ್ಳಲು ಸಿಎಸ್ಕೆ ಮಾತುಕತೆ ನಡೆಸುತ್ತಿದೆ.
ಕಳೆದ ಐಪಿಎಲ್ ಆವೃತ್ತಿಯಲ್ಲಿ ಹೈದರಾಬಾದ್ ಪರ ಕೇವಲ ಎರಡು ಪಂದ್ಯಗಳನ್ನಾಡಿ 15 ರನ್ ಗಳಿಸಿ ನಿರಾಶೆ ಮೂಡಿಸಿದ್ದ ಲಿವಿಂಗ್ಸ್ಟೋನ್ ಬದಲಿಗೆ ಸಿಎಸ್ಕೆ ತಂಡವು ವೇಗದ ಬೌಲರ್ ಖಲೀಲ್ ಅಹ್ಮದ್ ಅವರನ್ನು ಬಿಟ್ಟುಕೊಡುವ ಸಾಧ್ಯತೆ ಚರ್ಚೆಯಲ್ಲಿದೆ.