
ವೇತನ ಪರಿಷ್ಕರಣೆ ಹಾಗೂ 50 ಲಕ್ಷ ರೂ. ಪರಿಹಾರ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ 108 ಆ್ಯಂಬುಲೆನ್ಸ್ ನೌಕರರು ಪ್ರತಿಭಟನೆ ಆರಂಭಿಸಿದ್ದು, ಸರ್ಕಾರಕ್ಕೆ 15 ದಿನಗಳ ಗಡುವು ನೀಡಿದ್ದಾರೆ.
ನೌಕರರು ವಲಯವಾರು ವೇತನ ರದ್ದುಪಡಿಸಿ ಏಕರೂಪ ವೇತನ ಜಾರಿ, 3 ಪಾಳಿಯಲ್ಲಿ ಕೆಲಸದ ವ್ಯವಸ್ಥೆ ಹಾಗೂ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ನೀಡಬೇಕೆಂದು ಒತ್ತಾಯಿಸಿದ್ದಾರೆ.
ಮುಷ್ಕರದಿಂದ ರೋಗಿಗಳಿಗೆ ಯಾವುದೇ ತೊಂದರೆಯಾದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಆರೋಗ್ಯ ಸಚಿವ ಯು.ಟಿ. ಖಾದರ್ ಎಚ್ಚರಿಕೆ ನೀಡಿದ್ದಾರೆ.