
ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಸೈಟ್ ನೀಡುವುದಾಗಿ ನಂಬಿಸಿ 8.89 ಕೋಟಿ ರೂ. ವಂಚಿಸಿದ ಪ್ರಕರಣದಲ್ಲಿ ಹೊರಗುತ್ತಿಗೆ ನೌಕರ ರವೀಂದ್ರ ಕುಮಾರ್ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳು ಪ್ರಾಧಿಕಾರದ ಅಧಿಕೃತ ಖಾತೆಯಿಂದ 40ಕ್ಕೂ ಹೆಚ್ಚು ಅನಧಿಕೃತ ಖಾತೆಗಳಿಗೆ ಹಣ ವರ್ಗಾಯಿಸಿಕೊಂಡಿದ್ದು, ಪೊಲೀಸರು ಸದ್ಯ 3 ಕೋಟಿ ರೂ.ಗೂ ಅಧಿಕ ಹಣವನ್ನು ಫ್ರೀಜ್ ಮಾಡಿದ್ದಾರೆ.
ಪ್ರಕರಣದಲ್ಲಿ ಭಾಗಿಯಾದ ಆರೋಪದ ಮೇಲೆ ಮಾಜಿ ಆಯುಕ್ತ ಯೋಗಾನಂದ್ ಅವರಿಗಾಗಿ ಶೋಧ ನಡೆಯುತ್ತಿದ್ದು, ಆಗಸ್ಟ್ 30 ರಂದು ಸಚಿವರು ಕೊಪ್ಪಳಕ್ಕೆ ಭೇಟಿ ನೀಡಲಿದ್ದಾರೆ.