
ಭಾರತೀಯ ಹವಾಮಾನ ಇಲಾಖೆಯು ಆಗಸ್ಟ್ 14 ರಿಂದ ಮುಂದಿನ ಎರಡು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಿದೆ.
ಬೆಳಗಾವಿ, ಧಾರವಾಡ, ಗದಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿ ಭಾಗದಲ್ಲಿ ಉಂಟಾಗಿರುವ ವಾಯುಮಂಡಲದ ತಿರುಗುವಿಕೆಯ ಪರಿಣಾಮ ಮುಂದಿನ 10 ದಿನಗಳ ಕಾಲ ರಾಜ್ಯದಲ್ಲಿ ಮಳೆ ಮುಂದುವರಿಯುವ ಸಾಧ್ಯತೆಯಿದೆ.