
ಮೈಸೂರು ದಸರಾ 2026ರ ಯುವ ದಸರಾ ಕಾರ್ಯಕ್ರಮವನ್ನು ಉದ್ಘಾಟಿಸಲು ನಟ ಹಾಗೂ ನೃತ್ಯ ನಿರ್ದೇಶಕ ಪ್ರಭುದೇವ್ ಅವರನ್ನು ಸಮಿತಿ ಅಧಿಕೃತವಾಗಿ ಆಹ್ವಾನಿಸಿದೆ.
ಯುವ ದಸರಾ ಸಮಿತಿಯ ಕಾರ್ಯಾಧ್ಯಕ್ಷ ಸೋಮಶೇಖರ್ ನೇತೃತ್ವದ ತಂಡ ಚೆನ್ನೈನಲ್ಲಿ ಪ್ರಭುದೇವ್ ಅವರನ್ನು ಭೇಟಿಯಾಗಿ ಆಹ್ವಾನ ನೀಡಿದ್ದು, ಅವರು ಅದನ್ನು ಸಂತೋಷದಿಂದ ಸ್ವೀಕರಿಸಿದ್ದಾರೆ.
ಭಾರತದ ಮೈಕೆಲ್ ಜಾಕ್ಸನ್ ಎಂದೇ ಖ್ಯಾತರಾದ ಪ್ರಭುದೇವ್ ಅವರ ಆಗಮನದಿಂದ ಈ ಬಾರಿಯ ಯುವ ದಸರಾಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಆಗಮಿಸುವ ನಿರೀಕ್ಷೆಯಿದೆ.